Politics

*ಬಿಜೆಪಿ-ಜೆಡಿಎಸ್ ಮೈಸೂರು ಚಲೋ: ಜಂಟಿ ಪಾದಯಾತ್ರೆಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆಗೆ ಚಾಲನೆ ದೊರೆತಿದೆ.

ಬೆಂಗಳೂರಿನ ಕೆಂಗೇರಿ ನೈಸ್ ರಸ್ತೆಯಲ್ಲಿ ಕೆಂಪಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸುವ ಮೂಲಕ ನಗಾರಿ ಬಾರಿಸುವುದರೊಂದಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ ನೀಡಿದರು.

ಪಾದಯಾತ್ರೆ ಚಾಲನೆ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಂದ ಮೈಸೂರು ಚಲೋ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಉಭಯಪಕ್ಷಗಳ ನಾಯಕರು ಮುಡಾ ಹಗರಣ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಒಟ್ಟಾರೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಹಾಗೂ ಮೈಸೂರಿನ ಮೂಢ ಹಗರಣದ ವಿರುದ್ಧ ಮುಖ್ಯಮಂತ್ರಿಗಳ ರಾಜೀನಾಮೆಯನ್ನು ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿನ ವರೆಗೆ ನಡೆಯುವ ಪಾದಯಾತ್ರೆಯು ಇಂದು ಕೆಂಗೇರಿಯ ಕೆಂಪಮ್ಮ ದೇವಸ್ಥಾನದಿಂದ ರಣಕಹಳೆ ಊದುವ ಮೂಲಕ ಪ್ರಾರಂಭವಾಗಿದೆ.

Home add -Advt

ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಬಿ ವೈ ವಿಜಯೇಂದ್ರ ಆರ್ ಅಶೋಕ್ ,ಪ್ರಹ್ಲಾದ್ ಜೋಶಿ, ಸದಾನಂದ ಗೌಡ, ಜನಾರ್ಧನ ರೆಡ್ಡಿ, ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಗೋಪಾಲಯ್ಯರವರು ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಹಾಗೂ ಸಾವಿರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸಿದರು.


Related Articles

Back to top button