Politics

*ಮುಡಾ ಹಗರಣ: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಪಾದಯಾತ್ರೆಗೆ ಮುಹೂರ್ತ ಫಿಕ್ಸ್ ಆಗಿದೆ.

ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಸಭೆ ಬಳಿಕ ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಡಾ ಹಗರಣ ಖಂಡಿಸಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಿಂದ ಮೈಸೂರಿನ ವರೆಗೆ ಬಿಜೆಪಿ-ಜೆಡಿಎಸ್ ಎರಡೂ ಪಕ್ಷಗಳು ಪಾದಯಾತ್ರೆಗೆ ಸಜ್ಜಾಗಿವೆ. ಆಗಸ್ಟ್.3ರಿಂದ ಪಾದಯಾತ್ರೆ ಆರಂಭವಗಾಲಿದೆ ಎಂದು ಘೋಷಿಸಿದರು.

Home add -Advt

ಬೆಂಗಳೂರಿನಿಂದ ಮೈಸೂರಿಗೆ 7 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಆ.10ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶದ ಮೂಲಕ ಪಾದಯಾತ್ರೆ ಮುಕ್ತಾಯಗೊಳಿಸಲಾಗುವುದು ಎಂದರು.


Related Articles

Back to top button