ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಹಗರಣ, ಮೂಡಾ ಅಕ್ರಮದ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿದೆ. ಮುಡಾ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಅಶ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದಲ್ಲಿಯೇ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿವೆ.
ವಿಧಾನಸೌಧದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಅಕ್ರಮದ ಬಗ್ಗೆ ಚರ್ಚಿಸಲು ಅವಕಾಶ ನಿಡುತ್ತಿಲ್ಲ. ಸರ್ಕಾರದ ಧೋರಣೆ ಖಂಡಿಸಿ ಇಂದಿನಿಂದ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಘೋಷಿಸಿದರು.
ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಇಂದಿನಿಂದ ಅಧಿವೇಶನ ಮುಗಿಯುವವರೆಗೂ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ