ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸತತ ಎರಡು ದಿನಗಳ ಕಾಲ ನಡೆದ ಇಡಿ ದಾಳಿ ಅಂತ್ಯವಾಗಿದ್ದು ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ರಾಕೇಶ್ ಪಾಪಣ್ಣ ಹಾಗೂ ಮುಡಾ ಮಾಜಿ ಆಯುಕ್ತ ನಟೇಶ್ ಅವರ ವಿಚಾರಣೆ ನಡೆಸಿ ಹಲವು ದಾಖಲೆಗಳನ್ನು ಕಲೆಹಾಕಿದ್ದಾರೆ.
ಎರಡು ದಿನಗಳ ಕಾಲ 9 ಕಡೆಗಳಲ್ಲಿ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಸತತ 35 ಗಂಟೆಗಳ ಕಾಲ ತನಿಖೆ ನಡೆಸಿದ್ದಾರೆ. ಬಳಿಕ ಇಡಿ ಅಧಿಕಾರಿಗಳು ವಾಪಸ್ ತೆರಳಿದ್ದಾರೆ. ಈ ವೇಳೆ ಹಲವು ದಾಖಲೆಗಳನ್ನು ಸಂಗ್ರಹಿಸಿದ್ದು, ತನಿಖೆ ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ