Karnataka News

*ಮುಡಾ ಸಂಕಷ್ಟ: ಅಧಿಕಾರಿಗಳು, ಬಿಲ್ಡರ್ ಗಳ ಮನೆ ಮೇಲೆ ED ದಾಳಿ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ಮುಡಾ ಅಧಿಕಾರಿಗಳು, ಬಿಲ್ಡರ್ ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರು, ಮೈಸೂರು ಸೇರಿದಂತೆ 9 ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಖ್ಯಾತ ಬಿಲ್ಡರ್ ಓರ್ವರ ಮನೆಯಲ್ಲಿ ಮುಂಜಾನೆಯೇ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಶನಿವಾರ ಇಡಿ ಅಧಿಕಾರಿಗಳು ಮುಡಾ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಅಧಿಕಾರಿಗಳು, ಬಿಲ್ಡರ್ ಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.

Related Articles

Back to top button