Politics
*ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ*

ಮುಡಾ ಹಗರಣ
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಾಳೆ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧಾರವಾಗಲಿದೆ.
ನಾಳೆ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನ ನ್ಯಾ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಮುಡಾ ಹಗರಣಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟವಾಗಲಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸುದೀರ್ಘವಾಗಿ ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ನಾಳೆ ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.




