ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದರು.
ಇಂದು ಬೆಳಿಗ್ಗೆ ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಿಎಂ ಪತ್ನಿ ಪಾರ್ವತಿ ಅವರನ್ನು ಮೂರು ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದರು. ಈ ವೇಳೆ ಪಾರ್ವತಿ ಅವರಿಂದ ಅಧಿಕಾರಿಗಳು ಹೇಳಿಕೆ ದಾಖಲಿಸಿದರು. ಲೋಕಾಯುಕ್ತ ಅಧಿಕಾರಿಗಳು ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿದ್ದು, ಪಾರ್ವತಿ ಅವರ ಹೇಳಿಕೆ ಮಹತ್ವ ಪಡೆದುಕೊಂದಿದೆ.
ಮುಡಾ ಹಗರಣ ಸಂಬಂಧ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಎ3 ಮಲ್ಲಿಕಾರ್ಜುನಸ್ವಾಮಿ, ಎ4 ದೇವರಾಜು ಅವರ ವಿಚಾರಣೆಯನ್ನು ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಎ1 ಆರೋಪಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಮಾತ್ರ ಬಾಕಿಯಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ