
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮೂಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು, ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಕಲಿ ದಾಖಲೆ ಸೃಷ್ಟಿಸಿ ಮೂಡಾಗೆ ವಂಚಿಸಿ ಕೋಟ್ಯಂತರ ರೂಪಾಯಿ ಬೆಲೆಯ ನಿವೇಶನವನ್ನು ಪಡೆದಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ದೇವರಾಜು ವಿರುದ್ಧ ದೂರು ದಾಖಲಿಸಿದ್ದಾರೆ.
ರಾಜ್ಯಪಾಲರು, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದು ಪ್ರಕರಣ ಸಂಬಂಧ ಹಲವು ಪ್ರಶ್ನೆಗಳನ್ನು ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ