ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು.
ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಸ್ನೇಹಮಯಿ ಕೃಷ್ಣ ಪರ ವಕೀಲ ಮಣಿಂದರ್ ಸಿಂಗ್ ವಾದ ಆಲಿಸಿತು. ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಲಿದ್ದಾರೆ.
ಈ ವೇಳೆ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಪರ ವಕೀಲರು ಸಮಯ ಕೇಳಿದ್ದಾರೆ. ಸಿಎಂ ಪರ ವಕೀಲರ ಮನವಿ ಪರಿಗಣಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿದೆ. ಅಲ್ಲದೇ ಈವರೆಗಿನ ಲೋಕಾಯುಕ್ತ ತನಿಖೆಯ ವರದಿಯನ್ನು ಮುಂದಿನ ವಿಚಾರಣೆಗೆ ಒಂದು ದಿನ ಮೊದಲು ಸಲ್ಲಿಸುವಂತೆ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ