ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
ಮುಡಾ ಹಗರಣದ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಮುಡಾ ಹಗರಣ ಸಂಬಂಧ ಎ2 ಆರೋಪಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಎ3 ಆರೋಪಿ ಮಲ್ಲಿಕಾರ್ಜುನಯ್ಯ ಹಾಗೂ ಎ4 ದೇವರಾಜು ಸೇರಿದಂತೆ ಹಲವರ ವಿಚಾರಣೆ ಮುಕ್ತಾಯಗೊಂಡಿದ್ದು, ಎ1 ಆರೋಪಿ ಸಿಎಂ ಸಿದ್ದರಾಮಯ್ಯ ಅವರ ವಿಚಾರಣೆ ಮಾತ್ರ ಬಾಕಿಯಿದೆ. ಈ ನಿಟ್ಟಿನಲ್ಲಿ ನ.6ರಂದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ