ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಡಿಸೆಂಬರ್ 10ರಂದು ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದು, ಹೈಕೋರ್ಟ್ ಗೆ ವರದಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ನಡುವೆ ಸ್ನೇಹಮಯಿ ಕೃಷ್ಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ