*ಮುಡಾ ಹಗರಣ: ಸಿಎಂ ವಿರುದ್ಧ ಅರ್ಜಿ ವಿಚಾರಣೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಡಿಸೆಂಬರ್ 10ರಂದು ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿಕೊಂಡು ತನಿಖೆ … Continue reading *ಮುಡಾ ಹಗರಣ: ಸಿಎಂ ವಿರುದ್ಧ ಅರ್ಜಿ ವಿಚಾರಣೆ ಮುಂದೂಡಿಕೆ*