ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಹೈಕೋರ್ಟ್ ಏಕಸದಸ್ಯ ಪೀಠ ಕಾಯ್ದಿರಿಸಿದೆ.
ಇಂದು ನಡೆದ ಅರ್ಜಿ ವಿಚಾರಣೆ ವೇಳೆ ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಅಂತಿಮ ಹಂತದ ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿತು. ಮುಡಾ ಹಗರಣ ಸಂಬಂಧ ಅರ್ಜಿ ವಿಚಾರಣೆ ಮುಕ್ತಾಯವಾಗಿದ್ದು, ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಸಿಎಂ ಸಿದ್ದರಾಮಯ್ಯ ಪರ ಇಂದು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್, ರಾಜ್ಯ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ದೂರುದಾರ ಟಿ.ಜೆ.ಅಬ್ರಾಹಂ ಪರ ವಕೀಲ ರಂಗನಾಥ್ ರೆಡ್ಡಿ, ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅನಿರ್ಧಿಷ್ಟಾವಧಿಗೆ ತೀರ್ಪನ್ನು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ