Karnataka NewsPolitics

*ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯಪೀಠದಲ್ಲಿ ಆರಂಭವಾಗಿದೆ.

ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ ಮಂಡಿಸುತ್ತಿದ್ದಾರೆ.

ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಪರ ತುಷಾರ್ ಮೆಹ್ತಾ ವಾದ ಮಂಡನೆ ಮಾಡುತ್ತಿದ್ದಾರೆ.

ರಾಜ್ಯಪಾಲರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ ಅಡಿಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಆದರೆ ಆರೋಪಿತ ಘಟನೆ ನಡೆದಾಗ ಭಾರತೀಯ ನ್ಯಾಯ ಸಂಹಿತೆ ಜಾರಿಯಲ್ಲಿರಲಿಲ್ಲ. ರಾಜ್ಯಪಾಲರು ವಿವೇಚನೆ ಇಲ್ಲದೇ ಅನುಮತಿ ನೀಡಿದ್ದರಎ ಎಂಬುದಕ್ಕೆ ಇದು ಸಾಕ್ಷಿ. ಹೀಗಾಗಿ ರಾಜ್ಯಪಾಲರ ಅನುಮತಿಯೇ ಕಾನೂನು ಬಾಹಿರ ಎಂದು ವಕೀಲ ರವಿವರ್ಮ ಕುಮಾರ್ ವಾದ ಮಂಡಿಸಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಅವರ ಸಹೋದರನ ವಿರುದ್ಧ ಆರೋಪವಿದೆ. ಪತ್ನಿ ಹಾಗೂ ಮೈದುನನ ಲೋಪಗಳಿಗೆ ಸಿಎಂ ಸಿದ್ದರಾಮಯ್ಯ ಜವಾಬ್ದಾರಿಯಾಗುತ್ತಾರೆಯೇ? ಎಂದು ಕೇಳಿದ್ದಾರೆ.

ಇದಕ್ಕೆ ಪ್ರತಿವಾದ ಮಂಡಿಸಿದ ತುಷಾರ್ ಮೆಹ್ತಾ, ಪತ್ನಿ ಪರವಾಗಿ ಪತಿಗೆ ಪವಿತ್ರವಾದ ಹೊಣೆಗಾರಿಕೆ ಇರುತ್ತದೆ. ಎಲ್ಲಾ ಲೋಪಗಳನ್ನು ಪತಿಯಾದವನು, ಪತ್ನಿ ಮೇಲೆ ಹೊರಿಸಬಾರದು ಎಂದು ವಾದ ಮಂಡಿಸಿದ್ದಾರೆ. ಪ್ರಾಸಿಕ್ಯೂಷನ್ ಕುರಿತ ಅರ್ಜಿಯ ತೀರ್ಪು ಹೈಕೋರ್ಟ್ ಇಂದೇ ಪ್ರಕಟಿಸಲಿದೆಯೇ ಕಾದುನೋಡಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button