ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯಪೀಠ ಮುಂಡೂಡಿದೆ.
ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ ಬೆಳಿಗ್ಗೆಯಿಂದ ವಾದ-ಪ್ರತಿವಾದಿಗಳ ವಕೀಲರ ವಾಡಮಂದನೆಯನ್ನು ಆಲಿಸಿತು. ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ ಮಂಡಿಸಿದರೆ, ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಪರ ತುಷಾರ್ ಮೆಹ್ತಾ ವಾದ ಮಂಡನೆ ಮಾಡಿದರು. ಇದೇ ವೇಳೆ ದೂರುದಾರರ ಪರ ವಕೀಲರು ಕೂಡ ತಮ್ಮ ವಾದ ಮಂಡಿಸಿದ್ದಾರೆ.
ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಏಕಸದಸ್ಯಪೀಠ ಅರ್ಜಿ ವಿಚಾರಣೆಯನ್ನು ಸೆ.2ರಂದು ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ