ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ತೀರ್ಪು ಇಂದು ಪ್ರಕಟವಾಗಲಿದೆ.
ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟವಾಗಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ರಾಜ್ಯಾದ್ಯಂತ ಅಲರ್ಟ್ ಘೋಷಿಸಿದ್ದಾರೆ.
ಎಲ್ಲಾ ಕಮಿಷನರೇಟ್, ಜಿಲ್ಲೆಗಳ ಎಸ್ ಪಿ, ಡಿಸಿಪಿಗಳಿಗೆ ಎಲ್ಲೆಡೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬೀಟ್ ಹೆಚ್ಚಿಸಬೇಕು. ಎಲ್ಲೆಡೆ ಪೊಲೀಸರನ್ನು ನಿಯೋಜನೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ.
ಒಂದುವೇಳೆ ಸಿಎಂ ವಿರುದ್ಧ ತೀರ್ಪು ಬಂದರೆ ಪ್ರತಿಭಟನೆಗಳು ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗಳಿಯುವ ಸಾಧ್ಯತೆ ಇದೆ ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ