Karnataka News

*ಮುಡಾ ಹಗರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ದ್ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು.

ದೂರುದಾರರ ಪರ ವಕೀಲರು ಹಾಗೂ ಸಿಎಂ ಸಿದ್ದರಾಮಯ್ಯ ಪರ ವಕೀಲರ ವಾದ-ಪ್ರತಿವಾದವನ್ನು ಹೈಕೋರ್ಟ್ ಏಕಸದಸ್ಯಪೀಠ ಆಲಿಸಿದ್ದು, ಎರಡೂಕಡೆ ವಕೀಲರ ವಾದ ಮಂಡನೆ ಅಂತ್ಯವಾಗಿದೆ. ಆದರೆ ತೀರ್ಪು ಕಾಯ್ದಿರಿಸಲಾಗಿದೆ.

ಮುಡಾ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಆದೆಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಇದೇ ವೇಳೆ ಮುಡಾ ಹಗರಣದ ತನಿಖೆ ಬಗ್ಗೆ ಲೋಕಾಯುಕ್ತ ಪೊಲೀಸರು ಸಲ್ಲಿಸಬೇಕಿದ್ದ ಅಂತಿಮ ವರದಿ ಸಲ್ಲಿಕೆ ಗಡುವನ್ನು ವಿಸ್ತರಿಸಿದೆ. ಆದೇಶ ನೀಡುವವರೆಗೂ ಗಡುವು ವಿಸ್ತರಣೆ ಮಾಡಲಾಗಿದೆ.

Home add -Advt

Related Articles

Back to top button