ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐರ್ ದಾಖಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ಇಂದಿನಿಂದ ಅಧಿಕೃತವಾಗಿ ತನಿಖೆ ಆರಂಭಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರಿಗೆ ಇದೀಗ ಲೋಕಾಯುಕ್ತ ನೊಟೀಸ್ ಜಾರಿಯಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೊಟೀಸ್ ನೀಡಿದ್ದಾರೆ.
ನಾಳೆ ಬೆಳಿಗ್ಗೆ 7:30ಕ್ಕೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗುವಂತೆ ಸ್ನೇಹಮಯಿ ಕೃಷ್ಣ ಅವರಿಗೆ ವಾಟ್ಸಪ್ ಮೂಲಕ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಮುಡಾ ಹಗರಣ ಸಂಬಂಧ ತನಿಖೆ ಆರಂಭಿಸಿರುವ ಲೋಕಾಯುಕ್ತ ಮೊದಲ ನೊಟೀಸ್ ಜಾರಿ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ