Politics

*ಇಲಿ ಹೋಯ್ತು, ಕೋತಿ ಹೋಯ್ತು ಎಂದ್ರೂ ಸಿಬಿಐಗೆ ಕೊಡಿ ಅಂದ್ರೆ ಹೇಗೆ? ಸಚಿವ ಹೆಚ್.ಸಿ.ಮಹದೇವಪ್ಪ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಮುಡಾ ಅಕ್ರಮ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ನಮ್ಮ ಅಧಿಕಾರಿಗಳು ತನಿಖೆ ನಡೆಸಲು ಸಮರ್ಥರಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.

Home add -Advt

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ 50:50ರ ಪ್ರಕಾರ ಸೈಟ್ ಪಡೆದವರ ಪಟ್ಟಿಯನ್ನು ಜಾಹೀರಾತಿನ ಮೂಲಕ ಬಹಿರಂಗಪಡಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂಬ ಬಿಜೆಪಿ ನಾಯಕರ ಒತ್ತಾಯ ವಿಚಾರವಾಗಿ ಮಾತನಾಡಿದ ಸಚಿವರು, ಇಲಿ ಹೋಯ್ತು, ಕೋತಿ ಹೋಯ್ತು ಎಂದು ಸಿಬಿಐಗೆ ಕೊಡಬೇಕು ಅಂದ್ರೆ ಹೇಗೆ? ನಮ್ಮ ಅಧಿಕಾರಿಗಳು ತನಿಖೆ ನಡೆಸಲು ಸಮರ್ಥರಿದ್ದಾರೆ ಎಂದು ಗುಡುಗಿದರು.

ಬಿಜೆಪಿ ನಾಯಕರು ಎಲ್ಲವನ್ನು ಸಿಬಿಐ ತನಿಖೆಗೆ ಕೊಡಬೇಕು ಎನ್ನುತ್ತಿದ್ದಾರೆ. ಅವರ ಅವ್ಧಿಯಲ್ಲಿ ಎಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದರು? ಎಂದು ಪ್ರಶ್ನಿಸಿದರು.

Related Articles

Back to top button