
ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಧ್ಯಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ರಿಲೀಫ್ ನೀಡಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಬಗ್ಗೆ ಆದೇಶ ಸದ್ಯಕ್ಕಿಲ್ಲ. ಲೋಕಾಯುಕ್ತ ಇನ್ನೂ ತನಿಖೆ ಪೂರ್ಣಗೊಳಿಸಿಲ್ಲ. ಅಂತಿಮ ವರದಿ ಬಳಿಕವೇ ಆದೇಶ ನೀಡಲಾಗುವುದು ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರೆಸಬಹುದು ಎಂದು ಹೇಳಿದೆ.
ಅಲ್ಲದೇ ಲಾಕಾಯುಕ್ತ ಬಿ ರೊಪೋರ್ಟ್ ಗೆ ಇಡಿ ಕೂಡ ತಕರಾರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿರುವ ನ್ಯಾಯಾಲಯ ಮೇ ೭ ಕ್ಕೆ ಮುಂದಿನ ವಿಚಾರಣೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ.