
ಇಡಿ ನೋಟಿಸ್ ಸಾಧ್ಯತೆ
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈಗ ಮತ್ತೊಂದು ವಿಚಾರಣೆ ಟೆನ್ಶನ್ ಶುರುವಾಗಿದೆ. ಲೋಕಾಯುಕ್ತ ವಿಚಾರಣೆ ಬೆನ್ನಲ್ಲೇ ಇಡಿ-ಜಾರಿನಿರ್ದೇಶಾನಲಯ ವಿಚಾರಣೆ ಎದುರಾಗುವ ಸಾಧ್ಯತೆ ಇದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ದೂರಿನ ಹಿನ್ನೆಲೆಯಲ್ಲಿ ಈಗಾಗಲೇ ಇಡಿ ಕೂಡ ಮಧ್ಯಪ್ರವೇಶ ಮಾಡಿದ್ದು, ಮುಡಾದ ಐವರು ಅಧಿಕಾರಿಗಳ ವಿಚಾರಣೆ ನಡೆಸಿದೆ. ಮುಡಾ ಮಾಜಿ ಆಯುಕ್ತರು, ಬಿಲ್ಡರ್ ಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಇದೀಗ ಇಡಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಡಿ ವಿಚಾರಣೆ ಎದುರಿಸಬೇಕಾದ ಟೆನ್ಶನ್ ಶುರುವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ