Karnataka News

*ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ: ಇಡಿ ತನಿಖೆಗೆ ಹೈಕೋರ್ಟ್ ಅನುಮತಿ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾದಂತಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ-ಇಡಿ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ.

ಮುಡಾ ಮಾಜಿ ಆಯುಕ್ತ ಡಾ.ಡಿ.ಬಿ.ನಟೇಶ್ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. ಆದರೆ ಡಿ.ಬಿ.ನಟೇಶ್ ವಿರುದ್ಧದ ಸಮನ್ಸ್ ರದ್ದು ಆದೇಶ ತಡೆ ಇಲ್ಲ ಎಂದು ತಿಳಿಸಿದೆ. ಹೈಕೋರ್ಟ್ ಏಕಸದಸ್ಯಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಲು ವಿಭಾಗೀಯ ಪೀಠ ನಿರಾಕರಿಸಿದೆ.

ಡಿ.ಬಿ.ನಟೇಶ್ ಹೇಳಿಕೆ ಆಧರಿಸಿ ಇಡಿ ತನಿಖೆ ನಡೆಸಬಹುದು. ಅಲ್ಲದೇ ಶೋಧನೆ ವೇಳೆ ಸಿಕ್ಕ ದಾಖಲೆ ಆಧಾರಿಸಿಯೂ ತನಿಖೆ ನಡೆಸಬಹುದು ಎಂದು ಸಿಜೆ ಅಂಜಾರಿಯಾ, ನ್ಯಾ.ಅರವಿಂದ್ ಅವರಿದ್ದ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆ ಏ.8ಕ್ಕೆ ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


Related Articles

Back to top button