ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖೆಗೆ ಆದೇಶ ನೀಡಿರುವ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯಪೀಠ ನೀಡಿರುವ ಆದೇಶವನ್ನು ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮುಡಾದಿಂದ 14 ನಿವೇಶನಗಳನ್ನು ಅಕ್ರಮವಗಿ ಪಡೆದಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅನುಮತಿ ನೀಡಿ ಆದೇಶಿಸಿದ್ದರು. ಸಿಎಂ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಏಕಸದಸ್ಯ ಪೀಠ ಕೂಡ ರಾಜ್ಯಪಲರ ಆದೇಶ ಸರಿಯಾಗಿದೆ ಎಂದು ತೀರ್ಪು ನೀಡಿತ್ತು. ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ಆರಂಭವಾಗುತ್ತಿದ್ದಂತೆ ಸಿಎಂ ಪತ್ನಿ ಪಾರ್ವತಿ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ಕೇಸ್ ರದ್ದುಪಡಿಸುವಂತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ