*ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಮುಡಾ ಹಗರಣದ ಕುರಿತು ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆ ಇಲ್ಲ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಸ್ನೇಹಮಯಿ ಕೃಷ್ಣ ಅವರ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿದೆ. ಲೋಕಾಯುಕ್ತ ಸ್ವತಂತ್ರ … Continue reading *ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್*