ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ಬದಲಾಗಿ ಸಿಬಿಐ ನಡೆಸಬೇಕೆಂದು ಕೋರಿ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿಕೃಷ್ಣ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಿದೆ. ಸರ್ಕಾರದ ಪರ ವಕೀಲರು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ.
ಇದೇ ವೇಳೆ ಹೈಕೋರ್ಟ್ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಲೋಕಾಯುಕ್ತ, ಪ್ರಕರಣದ ಎ1 ಸಿಎಂ ಸಿದ್ದರಾಮಯ್ಯ, ಎ2 ಪಾರ್ವತಿ, ಎ3 ಮಲ್ಲಿಕಾರ್ಜುನಸ್ವಾಮಿ ಅವರಿಗೆ ನೋಟಿಸ್ ಜಾರಿಮಾಡಿದೆ.
ನ.25ರವರೆಗೆ ಲೋಕಾಯುಕ್ತ ನಡೆಸಿರುವ ತನಿಖೆ ವಿವರವನ್ನು ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಕೋರ್ಟ್ ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ