ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಮುಡಾ ಪ್ರಕರಣದ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದು, ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಅಧಿಕಾರಿಗಳು ಮುಖ್ಯಮಂತ್ರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿ ಮುಖ್ಯಮಂತ್ರಿ ಹುದ್ದೆಯಲ್ಲಿರುವಾಗಲೇ ವಿಚಾರಣೆ ಎದುರಿಸುತ್ತಿದ್ದು, ಲೋಕಾಯುಕ್ತ ಅಧಿಕರಿಗಳು ಸುದೀರ್ಘ ವಿಚಾರಣೆ ಮಾಡುವ ಸಾಧ್ಯತೆ ಇದೆ.
ಲೋಕಾಯುಕ್ತ ಕಚೇರಿ ಸುತ್ತಮುತ್ತ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಅತಿಥಿ ಗೃಹಕ್ಕೆ ಭೇಟಿ ನೀಡಿದರು. ಈ ವೇಳೆ ಗೌರವ ವಂದನೆ ಸ್ವೀಕರಿಸಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಉಪಸ್ಥಿತರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ