
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹಗರಣದ ಬಗ್ಗೆ ತನಿಖೆ ನಡೆಸಿರುವ ಲೋಕಾಯುಕ್ತ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.
ಲೋಕಾಯುಕ್ತ ವರದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ, ಜಮೀನು ಮಾಲೀಕ ದೇವರಾಜ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಪ್ರಕರಣದ ಬಗ್ಗೆ ಸಿಎಂ ಹಾಗೂ ಪತ್ನಿ ವಿರುದ್ಧ ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ.
ವರದಿಯಲ್ಲಿ 50 ಜನರ ಹೇಳಿಕೆ ಉಲ್ಲೇಖಿಸಲಾಗಿದೆ. ಒಟ್ಟು 11,200 ಪುಟಗಳ ತನಿಖಾ ವರದಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ