
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಪ್ರಕರಣಕ್ಕೆ ಇದೀಗ ರಾಷ್ಟ್ರಪತಿ ಎಂಟ್ರಿಯಾಗಿದ್ದಾರೆ.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಪ್ರಕರಣ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿಯಾಗಿದ್ದು, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ರಾಷ್ಟ್ರಪತಿಗಳಿಗೆ ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ರಮೇಶ್ ಬಾಬು ದೂರಿಗೆ ರಾಷ್ಟ್ರಪತಿ ಭವನದ ಮುಖ್ಯ ಕಾರ್ಯದರ್ಶಿಯಿಂದ ಪತ್ರ ಬಂದಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ