ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ತನಿಖೆ ನಡೆಸುವಂತೆ ಆದೇಶ ನೀಡಿದೆ. ಈ ಮಧ್ಯೆ ದೂರುದಾರ ಸ್ನೇಹಮಯಿ ಕೃಷ್ಣ, ನನಗೆ ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆ ಇಲ್ಲ ಎಂದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ ಕೃಷ್ಣ, ನನಗೆ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ. ಲೋಕಾಯುಕ್ತ ರಾಜ್ಯ ಸರ್ಕಾರ ಅಧೀನ ಸಂಸ್ಥೆ. ಇವರಿಂದ ಪಾರದರ್ಶಕ, ನಿಸ್ಪಕ್ಷಪಾತ ತನಿಖೆ ಅಸಾಧ್ಯ. ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಹೇಳಿದರು.
ಈ ನಿಟ್ಟಿನಲ್ಲಿ ಮಾನು ಹೋರಾಟ ನಡೆಸುತ್ತೇನೆ. ಲೋಕಾಯುಕ್ತ ತನಿಖೆಯಿಂದ ಯಾವುದೇ ಪ್ರಯೋಜನವಿಲ್ಲ. ಸಿಬಿಐ ತನಿಖೆ ನಡೆದರೆ ಮಾತ್ರ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ