
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಗರಣದ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಮೈಸೂರಿನ ದೇವರಾಜ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸ್ನೇಹಮಯಿ ಕೃಷ್ಣ ವಿರುದ್ಧ ಬ್ಲ್ಯಾಕ್ ಮೇಲ್ ಹಾಗೂ ಪ್ರತಿದಿನ ಒಂದಿಲ್ಲ ಒಂದು ಸುಳ್ಳು ಆರೋಪ ಮಾಡಿ ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ