Politics

*ಮುಡಾ ಹಗರಣ: ಸ್ವಪಕ್ಷದ ನಾಯಕರ ವಿರುದ್ಧವೇ ಗಂಭೀರ ಆರೋಪ ಮಾಡಿದ ಯತ್ನಾಳ್*

ಪ್ರಗತಿವಾಹಿನಿ ಸುದ್ದಿ: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ಆರೋಪ ಮಾಡಿದ್ದು, ಸಿಬಿಐ ತನಿಖೆ ನಡೆಸಿದರೆ ಯಾರೆಲ್ಲ ಇದ್ದಾರೆ ಎಂಬುದು ಗೊತ್ತಾಗುತ್ತದೆ ಎಂದಿದ್ದರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯತ್ನಾಳ್, ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಬಿಜೆಪಿಯಲ್ಲಿದ್ದಾಗಲೇ ಈ ಹಗರಣ ನಡೆದಿದೆ. ಲೋಕಸಭಾ ಚುನಾವಣೆ ವೇಳೆ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಅವರು ಯಾರ ಶಿಷ್ಯ ಎಂಬುದು ಎಲ್ಲರಿಗೂ ಗೊತ್ತು. ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಮೂರು ಪಕ್ಷಗಳ ನಡುವೆ ಒಳಒಪ್ಪಂದವಾಗಿದ್ದು, ಈಗ ಹಗರಣ ಬೆಳಕಿಗೆ ಬಂದಿದೆ.

ಮುಡಾ ಹಗರಣದಲ್ಲಿ ಕೇವಲ ಸಿದ್ದರಾಮಯ್ಯ ಒಬ್ಬರನ್ನೇ ಟಾರ್ಗೆಟ್ ಮಾಡಿದರೆ ಸಾಲದು. ಮೂರು ಪಕ್ಷಗಳ ನಾಯಕರ ವಿರುದ್ಧ ತನಿಖೆಯಾಗಬೇಕು. ಮುಡಾ ಅಕ್ರಮದಲ್ಲಿ ಯಡಿಯೂರಪ್ಪ ಇದ್ದಾರೋ, ವಿಜಯೇಂದ್ರ ಇದ್ದಾರೋ, ರಾಜೀವ ಇದ್ದಾರೋ, ಹೆಚ್ ಡಿಕೆ ಇದ್ದಾರೋ, ಇನ್ನು ಯಾರ್ಯಾರು ಇದ್ದಾರೆ ಎಂಬುದು ಸಿಬಿಐ ತನಿಖೆ ಮಾಡಿದರೆ ಎಲ್ಲವೂ ಹೊರಬರಲಿದೆ. ತಪ್ಪಿತಸ್ಥರ ವಿರುದ್ಧ ಕ್ರಮವಾಗಬೇಕು ಎಂದು ಆಗ್ರಹಿಸಿದರು.

ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆ ವೇಳೆ ಯಡಿಯೂರಪ್ಪ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಜಮೀರ್ ಅಹ್ಮದ್ ಹೀಗೆ ಎಲ್ಲರ ನಡುವೆ ಹೊಂದಾಣಿಕೆ ರಾಜಕಾರಣ ಮಾಡಲಾಗಿದೆ. ಈಗ ಸೋತ ಎಲ್ಲಾ ಸಂಸದರು ಮಾತನಾಡಲು ಶುರುಮಾಡಿದ್ದಾರೆ. ಮುಡಾ ಹಗರಣದ ವಿರುದ್ಧ ಪಾದಯಾತ್ರೆಗೆ ಹೋರಟಿದ್ದಾರೆ. ಯಾರ ವಿರುದ್ಧ ಪಾದಯಾತ್ರೆ ಮಾಡುತ್ತಾರೆ ಎಂಬುದನ್ನು ಅವರನ್ನೇ ಕೇಳಬೇಕು ಎಂದು ಬಿಜೆಪಿ ನಾಯಕರಿಗೇ ಟಾಂಗ್ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button