Kannada NewsKarnataka NewsLatest

*ಇನ್ಸ್ ಪೆಕ್ಟರ್ ಸಂದೇಶ್ ಗೆ ಮತ್ತೊಂದು ಸಂಕಷ್ಟ: ಶಿಕ್ಷಕಿ ಮೇಲೆ ಲೈಂಗಿಕ ದೌರ್ಜನ್ಯ: ಅತ್ಯಾಚಾರ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ದೂರು ನೀಡಲು ಬಂದಿದ್ದ ಮಹಿಳೆಯರನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ವೆಸಗಿದ್ದ ಆರ‍ೊಪ ಕೇಳಿಬಂದಿರುವ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಅವರ ಮೇಲಿನ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ವರದಿ ಬಂದಿದ್ದರೂ, ಬೆಳ್ತಂಗಡಿ ವೇಣೂರು ಠಾಣೆಯಲ್ಲಿ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ.

2018-2023ರ ಅವಧಿಯಲ್ಲಿ ಅತ್ಯಾಚಾರ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆ ಮೂಲಕ ಈ ಹಿಂದೆ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್​ಪೆಕ್ಟರ್​​​ ಆಗಿದ್ದ ಸಂದೇಶ್​​ಗೆ ಹೊಸ ಸಂಕಷ್ಟ ಎದುರಾಗಿದೆ.

ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದ್ದ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್​​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಠಾಣೆಯಲ್ಲಿ ಸಂದೇಶ್​​ ವಿರುದ್ಧ ಸಂತ್ರಸ್ತೆ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. 2018 ರಿಂದ 2023ರವರೆಗೆ ಶಿಕ್ಷಕಿ ಮನೆಗೆ ಹೋಗಿ ಬೆದರಿಸಿ ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Home add -Advt

2020ರಲ್ಲಿ ಸಂದೇಶ್​​​ ಬೆಳ್ತಂಗಡಿ ಸರ್ಕಲ್ ವ್ಯಾಪ್ತಿಯಲ್ಲಿರುವ ವೇಣೂರು ಪೊಲೀಸ್ ಠಾಣೆ ಸರ್ಕಲ್ ಇನ್ಸ್​ಪೆಕ್ಟರ್​​​ ಆಗಿದ್ದರು. ಹೀಗಾಗಿ ವೇಣೂರು ಠಾಣಾ ವ್ಯಾಪ್ತಿಯಲ್ಲೇ ಅತ್ಯಾಚಾರ ಆರೋಪದಡಿ ಸೆಕ್ಷನ್ 376(2)(a)(1), 376(2)(n), 384, 506ರಡಿ ಕೇಸ್ ದಾಖಲಾಗಿದೆ. ಸಂದೇಶ್ ವಿರುದ್ಧ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಪಿಐ​ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಮತ್ತು ಪ್ರೇರಿತ ಎಂದು ಸಾಬೀತಾಗಿದೆ ಎಂದು ನಿನ್ನೆಯಷ್ಟೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದರು. ಆ ಬೆನ್ನಲ್ಲೇ ಈಗ ಸಂದೇಶ್​​ ವಿರುದ್ಧ ಅತ್ಯಾಚಾರ ದೂರು ದಾಖಲಾಗಿದೆ.

Related Articles

Back to top button