Belagavi NewsBelgaum NewsKannada NewsKarnataka NewsLatest

ಮೂಡಲಗಿ ಮರ್ಡರ್: ಪತ್ನಿ, ಪ್ರಿಯಕರನ ಬಂಧನ

ಪ್ರಗತಿವಾಹಿನಿ ಸುದ್ದಿ, ಮೂಡಲಗಿ: ಅಮವಾಸ್ಯೆ ನಿಮಿತ್ತ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿ ಶ್ರೀಧರ ಅರ್ಜುನ ತಲ್ವಾರ (21) ಹಾಗೂ ಸಿದ್ದವ್ವ ಅಲಿಯಾಸ್ ಪ್ರಿಯಾಂಕಾ ಶಂಕರ ಜಗಮಟ್ಟಿ (21) ಬಂಧಿತರು.

ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿತ್ತು.

ಶಂಕರ್ ಸಿದ್ದಪ್ಪ ಜಗಮಟ್ಟಿ(27) ಕೊಲೆಯಾದ ವ್ಯಕ್ತಿ. ಅಮವಾಸ್ಯೆ ನಿಮಿತ್ತ ದಂಪತಿ ಸಮೇತ ಬನಸಿದ್ದೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದರು. ಕಳೆದ ಐದು-ಆರು ತಿಂಗಳ ಹಿಂದೆ ಮದುವೆಯಾಗಿದ್ದ ಶಂಕರ ಜಗಮಟ್ಟಿಯನ್ನು ದೇವಸ್ಥಾನದ ಆವರಣದಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು.
ಕೊಲೆಯ ಹಿಂದೆ ಪತ್ನಿಯ ಪ್ರೀಯಕರ ಕೈವಾಡ ಇರೋ ಶಂಕೆಯ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಮೂಡಲಗಿ ಪೊಲೀಸ್ ಠಾಣೆಯ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿ ಎಸ್ಪಿ ಡಾ. ಸಂಜೀವ ಪಾಟೀಲ್ ಸ್ಥಳಕ್ಕೆ ದೌಡಾಯಿಸಿ ತನಿಖೆಗೆ ಮಾರ್ಗದರ್ಶನ ನೀಡಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button