ನಾಗನೂರ : ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಮೂಡಲಗಿ : ನಾಗನೂರ ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು ೧.೮೯ ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ(ಹಂತ-೪)ಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಾಗನೂರ ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ರಸ್ತೆಗಳ ಸುಧಾರಣೆಗಾಗಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಪಟ್ಟಣದ ನಾಗರೀಕರ ಅಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡುವುದಾಗಿ ಹೇಳಿದರು.
ವಸತಿ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಣೆ : ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಾಗನೂರ ಪಟ್ಟಣ ಪಂಚಾಯತಿಯಿಂದ ೨೦೨೧-೨೨ನೇ ಸಾಲಿನ ವಾಜಪೇಯಿ ಹಾಗೂ ಅಂಬೇಡ್ಕರ ವಸತಿ ಯೋಜನೆಗಳ ೪೬ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿದರು. ವಾಜಪೇಯಿ ವಸತಿ ಯೋಜನೆಯಡಿ ಪ್ರತಿ ಫಲಾನುಭವಿಗೆ ೨.೭೦ ಲಕ್ಷ ರೂ. ಮತ್ತು ಅಂಬೇಡ್ಕರ ವಸತಿ ಯೋಜನೆಯಡಿ ಪ್ರತಿ ಫಲಾನುಭವಿಗೆ ೩.೩೦ ಲಕ್ಷ ರೂ. ಗಳನ್ನು ಮನೆಗಳನ್ನು ನಿರ್ಮಿಸಲು ನೀಡಲಾಗುತ್ತಿದೆ.
ಘಟಪ್ರಭಾ ಜೆಜಿ ಕೋ ಅಧ್ಯಕ್ಷ ಬಿ.ಆರ್. ಪಾಟೀಲ(ನಾಗನೂರ), ಮಾಜಿ ಸಚಿವ ಆರ್.ಎಂ. ಪಾಟೀಲ, ಎಪಿಎಂಸಿ ಮಾಜಿ ಅಧ್ಯಕ್ಷ ಶಂಕರ ಹೊಸಮನಿ, ಎಪಿಎಂಸಿ ನಿರ್ದೇಶಕ ಕೆಂಚಪ್ಪ ಸಕ್ರೆಪ್ಪಗೋಳ, ಪ್ರಭಾಶುಗರ ನಿರ್ದೇಶಕ ಕೆಂಚಗೌಡ ಪಾಟೀಲ, ಮುಖಂಡರಾದ ಚಂದ್ರು ಬೆಳಗಲಿ, ಅಲ್ಲಪ್ಪ ಗುಡೆನ್ನವರ, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲು ಪಾಟೀಲ, ಅರಭಾವಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪರಸಪ್ಪ ಬಬಲಿ, ಭೀಮಗೌಡ ಪಾಟೀಲ, ಭೀಮಪ್ಪ ಹಳಿಗೌಡರ, ಮುತ್ತೆಪ್ಪ ಖಾನಪ್ಪನವರ, ಸತ್ತೆಪ್ಪ ಕರವಾಡಿ, ಪಟ್ಟಣ ಪಂಚಾಯತ ಸದಸ್ಯರು, ಪಪಂ ಮುಖ್ಯಾಧಿಕಾರಿ ಆರ್.ಎಸ್. ರಂಗಸುಭೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವ್ಯಾಜ್ಯಗಳ ಪರಿಹಾರಕ್ಕಾಗಿ ಮಧ್ಯಸ್ಥಿಕೆ ಕೇಂದ್ರ ಸ್ಥಾಪನೆಗೆ ಸರ್ಕಾರ ಸಿದ್ಧ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
https://pragati.taskdun.com/politics/vakilara-bhavanainaugurationcm-basavaraj-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ