ಮೂಡಲಗಿಗೆ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ: ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಿಎಂ ಬೊಮ್ಮಾಯಿ ಭರವಸೆ

ಪ್ರಗತಿವಾಹಿನಿ ಸುದ್ದಿ; ಮೂಡಲಗಿ: ಮೂಡಲಗಿ ತಾಲೂಕಿನ ಸಾರ್ವಜನಿಕರ ಪ್ರಮುಖ ಬೇಡಿಕೆಯಾಗಿರುವ ಉಪ ನೋಂದಣಿ ಕಛೇರಿಯನ್ನು ನವ್ಹೆಂಬರ್ ಅಂತ್ಯದೊಳಗೆ ಪ್ರಾರಂಭಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಮೂಡಲಗಿ ತಾಲೂಕಿಗೆ ಉಪ ನೋಂದಣಿ ಕಛೇರಿ ಮಂಜೂರು ಮಾಡುವ ಸ್ಪಷ್ಟ ಭರವಸೆ ನೀಡಿದ್ದಾರೆಂದು ಹೇಳಿದರು.
ಸಾರ್ವಜನಿಕರ ಬೇಡಿಕೆಯನುಸಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮೂಡಲಗಿಗೆ ಅಗತ್ಯವಿರುವ ಉಪ ನೋಂದಣಿ ಕಛೇರಿ ಮಂಜೂರಾತಿಗೆ ಮನವಿ ಮಾಡಿಕೊಳ್ಳಲಾಗಿದೆ. ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಬೊಮ್ಮಾಯಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಡತ ಮಂಡಿಸಲು ಸೂಚಿಸಿದ್ದು, ಬರುವ ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ ನೀಡುವುದಾಗಿ ಭರವಸೆ ನೀಡಿದ್ದಾರೆಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕಾರಿಣಿಯಲ್ಲಿ ಬೊಮ್ಮಾಯಿ ವಾಗ್ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ