Latest

ಕಾಂಗ್ರೆಸ್ ಗೆ ಮತ್ತೊಂದು ಶಾಕ್; ರಾಜೀನಾಮೆ ಘೋಷಿಸಿದ ಮಾಜಿ ಸಂಸದ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿ ಆರಂಭವಾಗಿದೆ. ಕಾಂಗ್ರೆಸ್ ನ ಪ್ರಮುಖ ನಾಯಕರುಗಳು ರಾಜೀನಾಮೆ ನೀಡಿ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ.

ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ತುಮಕೂರು, ಕುಣಿಗಲ್ ಹಾಗೂ ಗುಬ್ಬಿ ಕ್ಷೇತ್ರದಲ್ಲಿ ಪ್ರಭಾವಿಯಾಗಿದ್ದ ಮುದ್ದಹನುಮೇಗೌಡ ಇದೀಗ ಪಕ್ಷ ತೊರೆಯಲು ಮುಂದಾಗಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ಪಕ್ಷದಿಂದ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಮುದ್ದಹನುಮೇಗೌಡ, ಪಕ್ಷದ ಚಟುವಟಿಕೆಗಳಿಂದ ಹಲವು ದಿನಗಳಿಂದ ದೂರ ಉಳಿದಿದ್ದರು. ಮುಂಬರುವ ವಿಧಾನಸಭಾ ಚುನಾವಣೆಗೆ ಕುಣಿಗಲ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವ್ರಾ ಬೇಡಿಕೆಗೆ ಹಿರಿಯ ನಾಯಕರು ಒಪ್ಪಿಲ್ಲ. ಕುಣಿಗಲ್ ಹಾಲಿಶಾಸಕ ರಂಗನಾಥ್ ಅವರುಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಒಲವು ತೋರಿದ್ದಾರೆ ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಂಸದ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ.
25 ಲಕ್ಷ ರೂ ಬಹುಮಾನ : NIA ಘೋಷಣೆ

Related Articles

Back to top button