*BREAKING: 20ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿದ ರೈತರು*

ಪ್ರಗತಿವಾಹಿನಿ ಸುದ್ದಿ: ಟನ್ ಕಬ್ಬಿಗೆ 3500 ರೂಪಾಯಿ ನಿಗದಿ ಮಾಡಲೇಬೇಕು ಎಂದು ಪಟ್ಟು ಹಿಡಿದು ಹೋರಾಟ ನಡೆಸುತ್ತಿರುವ ಬಾಗಲಕೋಟೆ ಜಿಲ್ಲೆಯ ಮುಧೋಳ ಭಾಗದ ರೈತರು ಪ್ರತಿಭಟನೆ ತೀವ್ರಗೊಳಿಸಿದ್ದು, ರೈತರ ಆಕ್ರೋಶಕ್ಕೆ 20ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗಳು ಹೊತ್ತಿ ಉರಿದಿವೆ.
ಮುಧೋಳದ ಸಮೀರವಾಡೆ ಗೋದಾವರಿ ಸಕ್ಕರೆ ಕಾರ್ಖಾನೆಗೆ ನುಗ್ಗಿದ ಪ್ರತಿಭಟನಾ ನಿರತ ರೈತರು, ಕಾರ್ಖಾನೆ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೆಡೆ ಕಬ್ಬು ಬೆಳೆಗಾರರು ಹೋರಾಟ ನಡೆಸಿದ್ದರೆ ಮತ್ತೊಂದೆಡೆ ಕೆಲ ಕಬ್ಬು ಬೆಳೆಗಾರರು ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವುದಕ್ಕೆ ರೊಚ್ಚಿಗೆದ್ದಿದ್ದಾರೆ. ಕಾರ್ಖಾನೆ ಮೊದಲು ಬಾಕಿ ಬಿಲ್ ಪಾವತಿಸಲಿ ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ ಕಾರ್ಖಾನೆ ಆವರಣದಲ್ಲಿ ನಿಲ್ಲಿಸಿದ್ದ 20ಕ್ಕೂ ಹೆಚ್ಚು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ಕಬ್ಬಿನ ವಾಹನಗಳು ಹಾಗೂ ಕಾರ್ಖಾನೆ ಆವರಣದಲ್ಲಿದ್ದ ಬೈಕ್, ಇತರ ವಾಹನಾಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ನಂದಿಸಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ.



