*BJP ಕಾರ್ಯಕರ್ತರಿಂದಲೇ ಯಡಿಯೂರಪ್ಪ, ಸಿ.ಟಿ.ರವಿ ಕಾರಿಗೆ ಘೇರಾವ್*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ರಾಷ್ರೀಯ ಹೆದ್ದಾರಿಯಲ್ಲಿ ಬಿಜೆಪಿ ಕಾರ್ಯಕರ್ತರ ಹೈಡ್ರಾಮ ನಡೆದಿದೆ. ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಇಂದು ಮೂಡಿಗೆರೆಯಲ್ಲಿ ಬಿಜೆಪಿ ವಿಜಯಸಂಕಲ್ಪ ಯಾತ್ರೆ ಆಯೋಜನೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಎಂಎಲ್ ಸಿ ಪ್ರಾಣೇಶ್ ಮೂಡಿಗೆರೆಗೆ ಆಗಮಿಸುತ್ತಿದ್ದರು. ಈ ವೇಳೆ ಮೂಡಿಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದ ಬಿಜೆಪಿ ಕಾರ್ಯಕರ್ತರು, ಯಡಿಯುರಪ್ಪ, ಸಿಟಿ ರವಿ ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂ.ಪಿ.ಕುಮಾರಸ್ವಾಮಿಗೆ ಈಬಾರಿ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಎಂ.ಪಿ.ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ತಮ್ಮದೇ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಸಿಡಿದೆದ್ದ ರೀತಿಗೆ ಸಿ.ಟಿ.ರವಿ ಮುಜುಗರಕ್ಕೀಡಾಗಿದ್ದಾರೆ.

ಬಿಜೆಪಿ ಕಾರ್ಯಕರ್ತರ ಆಕ್ರೋಶ, ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿಜಯಸಂಕಲ್ಪ ಸಮಾವೇಶವನ್ನೇ ರದ್ದು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button