ಪ್ರಗತಿವಾಹಿನಿ ಸುದ್ದಿ – 2024ರ ಲೋಕಸಭಾ ಚುನಾವಣೆಗೆ ನಾಳೆಯೇ ದಿನಾಂಕ ಘೋಷಣೆಯಾಗಲಿದೆ. ನಾಳೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ.
ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಸುದ್ದಿಗೋಷ್ಠಿ ನಡೆಸಲಿದ್ದು, ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟಿಸಲಿದ್ದಾರೆ.
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ನೀತಿ ಸಂಹಿತೆ ಕೂಡ ಜಾರಿಗೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಳೆ ಕೇಂದ್ರ ಚುನವಣಾ ಆಯೋಗ ನಡೆಸುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ