Kannada NewsKarnataka NewsLatestPolitics
ವಿಜಯೇಂದ್ರ ಅಧಿಕಾರ ಸ್ವೀಕಾರ, ಸಮಾವೇಶ, ವಿರೋಧ ಪಕ್ಷದ ನಾಯಕನ ಆಯ್ಕೆಗೆ ಮುಹೂರ್ತ ಫಿಕ್ಸ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು– ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ಬುಧವಾರ (ನ.15) ಅಧಿಕಾರ ವಹಿಸಿಕೊಳ್ಳುವರು.
ತುಮಕೂರಿನಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ. ನ. 16ರಂದು ಬೆಂಗಳೂರಿನಲ್ಲಿ ಕಾರ್ಯಕರ್ಮತ ಸಮಾವೇಶ ನಡೆಯಲಿದೆ. ನ.17ರಂದು ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲೇ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಯಾಗುವ ಸಾಧ್ಯತೆ ಇದೆ.
ವಿಜೇಯೇಂದ್ರ ಆಯ್ಕೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಿಂದ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಆಕಾಂಕ್ಷಿಗಳು ಒಳಗೊಳಗೇ ಕುದಿಯುತ್ತಿದ್ದು, ಬಹಿರಂಗವಾಗಿ ಹೇಳಿಕೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಮಾಜಿ ಸಚಿವ ಸಿ.ಟಿ.ರವಿ, ವಿ.ಸೋಮಣ್ಣ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುರುಗೇಶ ನಿರಾಣಿ ಸ್ವಾಗತಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ