ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಆಗಸ್ಟ್ 20 ರಂದು ರಾಜ್ಯದಲ್ಲಿ ಉದ್ಘಾಟನೆಗೊಳ್ಳಲಿರುವ ದೇಶದ ಚರಿತ್ರೆಯಲ್ಲೇ ಅತ್ಯಂತ ದೊಡ್ಡ ಜನೋಪಯೋಗಿ ಯೋಜನೆ “ಗೃಹ ಲಕ್ಷ್ಮಿ” ಕಾರ್ಯಕ್ರಮದ ಯಶಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಜತೆ ಮಂಗಳವಾರ ವಿಡಿಯೊ ಸಂವಾದ ನಡೆಸಿದರು.
ಬೆಳಗ್ಗೆಯಿಂದ ಬಿಡುವಿಲ್ಲದ ಕಾರ್ಯಕ್ರಮಗಳ ಮಧ್ಯೆ ಮುಖ್ಯಮಂತ್ರಿಗಳು ಸಂಜೆ 7 ಗಂಟೆಯಿಂದ ವಿಡೀಯೋ ಸಂವಾದ ನಡೆಸಿ ಚರ್ಚಿಸಿದರು.
ಬೆಳಗ್ಗೆ 11 ಗಂಟೆಯಿಂದ 2 ಗಂಟೆಯವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆಯವರೆಗೆ ವಿವಿಧ ಜಿಲ್ಲೆಯ ಶಾಸಕರು, ಸಚಿವರೊಂದಿಗೆ ಸಭೆ ನಡೆಸಿದ ಸಿಎಂ, ಆರು ಜಿಲ್ಲೆಗಳ 50 ಶಾಸಕರ ಬೇಡಿಕೆ ಮತ್ತು ಸಲಹೆಗಳನ್ನು ಅತ್ಯಂತ ಸಹನೆಯಿಂದ ಕೇಳಿ ಭರವಸೆ ನೀಡಿದರು.
ಮಧ್ಯಾಹ್ನ ಊಟದ ಬಿಡುವೂ ಇಲ್ಲದಂತೆ, ಸಭೆ ನಡೆಸುತ್ತಲೇ ಊಟ ಮಾಡಿದ ಸಿದ್ದರಾಮಯ್ಯ, ರಾಯಚೂರು, ವಿಜಯಪುರ, ಕೊಪ್ಪಳ, ಹಾವೇರಿ, ಬೆಳಗಾವಿ, ಕಲಬುರಗಿ ಜಿಲ್ಲೆಗಳ ಶಾಸಕರು ಮತ್ತು ಜಿಲ್ಲಾ ಸಚಿವರು ಹಾಗೂ ಕಾರ್ಯದರ್ಶಿಗಳ ಜತೆ ಸರಣಿ ಸಭೆಗಳನ್ನು ನಡೆಸಿದರು.
*ಕ್ಷೇತ್ರದ ಕೆಲಸಗಳು, ಅಗತ್ಯ ಅನುದಾನ, ಪರಸ್ಪರ ಸಮನ್ವಯತೆ ಮತ್ತು ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಸಿದರು.
ಬೆಳಗ್ಗೆ 10 ಗಂಟೆಗೆ ತಮ್ಮ ನಿವಾಸದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸುವ ಮೂಲಕ ದಿನಚರಿ ಆರಂಭಿಸಿದ ಮುಖ್ಯಮಂತ್ರಿಗಳು ರಾತ್ರಿ 9 ಗಂಟೆವರೆಗೂ (11 ಗಂಟೆಗಳ ಕಾಲ) ಸರಣಿ ಸಭೆಗಳನ್ನು ಬಿಡುವಿಲ್ಲದಂತೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ