Latest

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮುಕುಲ್ ವಾಸ್ನಿಕ್?; ಜಿ 23 ನಾಯಕರಿಂದ ಹೆಚ್ಚಿದ ಒತ್ತಡ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಬೆನ್ನಲ್ಲೇ ಆತ್ಮಾವಲೋಕನ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಮಹತ್ವದ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಭೆಗೂ ಮುನ್ನವೇ ಎಐಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಒತ್ತಾಯ ಕೇಳಿಬಂದಿದೆ.

ಕಾಂಗ್ರೆಸ್ ರೆಬಲ್ ನಾಯಕರೆಂದೇ ಗುರುತಿಸಿಕೊಂದಿರುವ ಜಿ 23 ನಾಯಕರು ನಾಯಕತ್ವ ಬದಲಾವಣೆಗಾಗಿ ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮುಕುಲ್ ವಾಸ್ನಿಕ್ ಅವರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್, ಆನಂದ್ ಶರ್ಮಾ ಸೇರಿದಂತೆ ಜಿ 23 ಕಾಂಗ್ರೆಸ್ ಭಿನ್ನಮತೀಯರ ಗುಂಪು ಮುಕುಲ್ ವಾಸ್ನಿಕ್ ಅವರನ್ನು ಕಾಂಗ್ರೆಸ್ ಅಧ್ಯಕ್ಶರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿದೆ. ಆದರೆ ಗಾಂಧಿ ಕುಟುಂಬ ವಾಸ್ನಿಕ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲು ಒಪ್ಪುತ್ತಿಲ್ಲ ಎನ್ನಲಾಗಿದೆ.

ಪಂಚರಾಜ್ಯಗಳ ಚುನಾವಣೆ ಸೋಲು, ಎಐಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗಾಗಿ ಕಾಂಗ್ರೆಸ್ ನಾಯಕರ ಪಟ್ಟು ಈ ಎಲ್ಲಾ ಬೆಳವಣಿಗಳ ನಡುವೆ ಇಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಮಹತ್ವ ಪಡೆದುಕೊಂಡಿದೆ.
ಪಂಜಾಬ್ ಚುನಾವಣೆಯ ಗೆಲುವಿನ ಹಿನ್ನೆಲೆ: ಆಮ್ ಆದ್ಮಿ ಪಾರ್ಟಿ ಸೇರಲಿದ್ದಾರಾ ರಾಜ್ಯದ ಪ್ರಮುಖ ರಾಜಕೀಯ ಮುಖಂಡರು ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button