ಪ್ರಗತಿವಾಹಿನಿ ಸುದ್ದಿ; ಲಕ್ನೌ: ಉತ್ತರ ಪ್ರದೇಶ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಯಾದವ್ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.2ರಂದು ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕಳೆದ 8ದಿನಗಳಿಂದ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ. ನಿನ್ನೆ ರಾತ್ರಿ ಜೀವರಕ್ಷಕ ವ್ಯವಸ್ಥೆ ಅಂದರೆ ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಇದೀಗ ಆಸ್ಪತ್ರೆ ವೈದ್ಯರು ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ ಎಂದು ತಿಳಿಸಿದ್ದಾರೆ.
ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ರಾಷ್ತ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಓರ್ವ ಗಮನಾರ್ಹ ವ್ಯಕ್ತಿತ್ವ ಹೊಂದಿದ್ದರು. ಜನರ ಸಮಸೆಗೆ ಸ್ಪಂದಿಸುತ್ತಿದ್ದ ಅವರು ವಿನಮ್ರ ಹಾಗೂ ಉತ್ತಮ ನಾಯಕ ಎಂದೇ ಹೆಸರಾಗಿದ್ದರು. ಲೋಕನಾಯಕ್ ಜೆಪಿ ಹಾಗೂ ಡಾ.ಲೋಹಿಯಾ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಾಗಿದ್ದರು. ರಕ್ಷಣಾ ಸಚಿವರಾಗಿ ಬಲಿಷ್ಥ ಭಾರತಕ್ಕಾಗಿ ಶ್ರಮಿಸಿದವರು. ರಾಷ್ಟ್ರೀಯ ಹಿತಾಸಕ್ತಿಗಳನ್ನು ಹೆಚ್ಚಿಸಲು ಶ್ರಮಿಸಿದ್ದರು. ಮುಲಾಯಂ ಸಿಂಗ್ ಅಗಲಿಕೆ ದು:ಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಹಿರಿಯ ನಟ ಲೋಹಿತಾಶ್ವ ಅವರಿಗೆ ಹೃದಯಾಘಾತ
https://pragati.taskdun.com/latest/lohitashwaheart-attackhospitalized/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ