Cancer Hospital 2
Beereshwara 36
LaxmiTai 5

*ರಾಜ್ಯದ ಈ ಪ್ರವಾಸಿ ತಾಣಗಳಲ್ಲಿ ಚಾರಣಕ್ಕೆ ನಿಷೇಧ*

Anvekar 3

ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್ ಗಾಗಿ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜಾರಿಗೆ ಬರಲಿದ್ದು, ಈ ನಿಟ್ಟಿನಲ್ಲಿ ಹಲವು ಪ್ರವಾಸಿ ತಾಣಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ.

ಪ್ರವಾಸಿ ತಾಣಗಳಲ್ಲಿ ಅದರಲ್ಲಿಯೂ ಮುಖ್ಯವಾಗಿ ಚಾರಣ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದಾಗಿ ಮುಂಜಾಗೃತಾ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಅದರಂತೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಎತ್ತಿನಭುಜ ಪ್ರದೇಶಗಳಲ್ಲಿ ಚಾರನಕ್ಕೆ ನಿಷೇಧ ಹೇರಲಾಗಿದೆ.

Emergency Service

ಮುಂಗಾರು ಸಂದರ್ಭದಲ್ಲಿ ಚಿಕ್ಕಮಗಳೂರಿನ ಪ್ರಕೃತಿ ಸೌಂದರ್ಯ ರಮಣೀಯವಾಗಿ ಕಣ್ಮನ ಸೆಳೆಯುತ್ತದೆ. ಚರಣಕ್ಕಾಗಿ ಬರುವ ಪ್ರವಾಸಿಗರ ಸಂಖ್ಯೆ ಯಥೇಚ್ಛವಾಗಿರುತ್ತದೆ. ಈಗಾಗಲೇ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ನಡುವೆಯೂ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ಮುಳ್ಳಯ್ಯನಗಿರಿ, ಎತ್ತಿನಭುಜದಲ್ಲಿ ಟ್ರಕ್ಕಿಂಗ್ ಮಾಡುವುದು ಅಪಾಯಕಾರಿ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾತ್ಕಾಲಿಕವಾಗಿ ಈ ಪ್ರದೇಶಗಳಲ್ಲಿ ಟ್ರಕ್ಕಿಂಗ್ ನಿಷೇಧಿಸಲಾಗಿದೆ.

ನಿಷೇಧವಿದ್ದರೂ ಚಾರಣಕ್ಕೆ ಅವಕಾಶ ನೀಡಿದ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯ, ಪ್ರವಾಸೋದ್ಯಮ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

Bottom Add3
Bottom Ad 2