
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕರಾವಳಿ, ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ.
ಭಾರಿ ಮಳೆಯಿಂದಾಗಿ ಮುಳ್ಳಯ್ಯನಗಿರಿಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು, ರಸ್ತೆ ಸಂಪೂರ್ಣ ಬಂದ್ ಆಗಿದೆ. ಚಿಕ್ಕಮಗಳೂರಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕಳೆದ ಮೂರು ದಿನಗಳಿಂದ ನಿರಂತರವಾಗಿ ಗುಡ್ಡ ಕುಸಿಯುತ್ತಿದೆ.
ಇಂದು ಮುಂಜಾನೆ ಮುಳ್ಳಯ್ಯನಗಿರಿ ಮಾರ್ಗದಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಮುಂಜಾಗೃತ ಕ್ರಮವಾಗಿ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ