ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಬೈ ಮೂಲದ ಗ್ಯಾಂಗ್ ಸ್ಟರ್ ನನ್ನು ಬೆಂಗಳೂರಿನ ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.
ಗ್ಯಾಂಗ್ ಸ್ಟರ್ ಅಬ್ದುಲ್ ಅಜೀಜ್ ಖಾನ್ ಬಂಧಿತ ಆರೋಪಿ. ಮುಂಬೈ ಮೂಲದ ಕುಖ್ಯಾತ ಗ್ಯಾಂಗ್ ಸ್ಟರ್ ಆಗಿದ್ದ ಈತ ಕೊಲೆ, ದರೋಡೆ, ಬೆದರಿಕೆ, ಡ್ರಗ್ಸ್ ಪ್ರಕರಣಗಳು ಸೇರಿ ಒಟ್ಟು 37 ಪ್ರಕರಣಗಳಲ್ಲಿ ಭಾಗಿಯಾಗಿದ್ದ.
ಅತ್ತಿಬೆಲೆಯ ರೆಸ್ಟೋರೆಂಟ್ನಲ್ಲಿ ಅಡಗಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಬಂಧಿತನಿಂದ ಪಿಸ್ತೂಲ್, ನಾಲ್ಕು ಜೀವಂತ ಗುಂಡು ವಶಕ್ಕೆ ಪಡೆಯಲಾಗಿದೆ. 15 ಸಿಮ್ ಕಾರ್ಡ್ಗಳು, 6 ಮೊಬೈಲ್ ಫೋನ್ಗಳು ಜಪ್ತಿ ಮಾಡಲಾಗಿದೆ.
ಅಗ್ನಿಅವಘಡ; 8 ತಿಂಗಳ ಮಗು ಸೇರಿ ಐವರ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ