
ಪ್ರಗತಿವಾಹಿನಿ ಸುದ್ದಿ: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ WPL 2025 ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಟವನ್ನು 8 ರನ್‌ಗಳಿಂದ ಸೋಲಿಸಿ ಟ್ರೋಫಿಗೆ ಮುತ್ತಿಕ್ಕಿದೆ.
ಮುಂಬೈ ತಂಡವು ಎರಡನೇ ಬಾರಿಗೆ WPL ಪ್ರಶಸ್ತಿಯನ್ನು ಗೆದ್ದಿದೆ. ಇದರೊಂದಿಗೆ ಒಂದಕ್ಕಿಂತ ಹೆಚ್ಚು WPL ಪ್ರಶಸ್ತಿಗಳನ್ನು ಗೆದ್ದ ಮೊದಲ ತಂಡವಾಗಿ ಹೊರಹೊಮ್ಮಿದೆ.
MI ಅಂತಿಮ ಪಂದ್ಯದಲ್ಲಿ 149/7 ಗಳಿಸಿತ್ತು. ಈ ಗುರಿ ಬೆನ್ನಟ್ಟಿದ DC 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಿ ಸೋಲು ಒಪ್ಪಿಕೊಂಡಿತು. ಇದರೊಂದಿಗೆ DC ಸತತವಾಗಿ ಮೂರು WPL ಫೈನಲ್ ಗಳಲ್ಲಿ ಸೋತಿದೆ.