ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೆಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಮುಂಬೈ ಮೂಲದ ಆರೋಪಿ ಶಂಕರ್ ಮಿಶ್ರಾ ಬಂಧಿತ ವ್ಯಕ್ತಿ. ನವೆಂಬರ್ 26ರಂದು ಏರ್ ಇಂಡಿಯಾ ವಿಮಾನದಲ್ಲಿ ಶಮ್ಕರ್ ಮಿಶ್ರಾ ಮಹಿಲೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ಮಹಿಳೆ ಈ ಬಗ್ಗೆ ಪೊಲಿಸರುಗೆ ದೂರು ನೀಡಿದ್ದರು.
ಘಟನೆ ಬಳಿಕ ಆರೋಪಿ ಮಿಶ್ರಾ ತನಗೆ ಹೆಂಡತಿ ಮಕ್ಕಳಿದ್ದಾರೆ, ದಯವಿಟ್ಟು ಪೊಲೀಸರಿಗೆ ದೂರು ನೀಡದಂತೆ ಮಹಿಳೆಯನ್ನು ಬೇಡಿಕೊಂಡಿದ್ದನಂತೆ. ಪ್ರಕರಣ ದಾಖಲಿಸಿಕೊಂಡಿದ್ದ ದೆಹಲಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು.
ಆರೋಪಿ ಶಂಕರ್ ಮಿಶ್ರಾನನ್ನು ಇದೀಗ ಬೆಂಗಳೂರಿನಲ್ಲಿ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನವೆಂಬರ್ 26ರಂದು ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಶಂಕರ್ ಮಿಶ್ರಾ, ತನ್ನ ಪ್ಯಾಂಟ್ ಬಿಚ್ಚಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಎಂದು ಆರೋಪಿಸಲಾಗಿದೆ. ಘಟನೆ ಬೆನ್ನಲ್ಲೇ ಏರ್ ಇಂಡಿಯಾ ವಿರುದ್ಧವೂ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
*ಹಿಟ್ ಆಂಡ್ ರನ್ : ಇಬ್ಬರು ಮಹಿಳೆಯರು ದುರ್ಮರಣ*
https://pragati.taskdun.com/carautoaccidenttwo-womandeath/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ