
ಪ್ರಗತಿವಾಹಿನಿ ಸುದ್ದಿ; ಮುಂಬೈ: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ದುರಂತವೊಂದು ತಪ್ಪಿದೆ. ಲ್ಯಾಂಡಿಂಗ್ ವೇಳೆ ವಿಮಾನವೊಂದು ರನ್ ವೇ ಯಿಂದ ಸ್ಕಿಡ್ ಆಗಿದ್ದು, ಮೂವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ವಿಶಾಖಪತ್ಟಣಂ ನಿಂದ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಖಾಸಗಿ ವಿಮನವೊಂದು ಲ್ಯಾಂಡಿಂಗ್ ವೇಳೆ ರನ್ ವೇಯಿಂದ ಜಾರಿದೆ. ಪರಿಣಾಮ ಮೂವರು ಪ್ರಯಾಣಿಕರಿಗೆ ಗಾಯಗಳಾಗಿವೆ. ವಿಮಾನದಲ್ಲಿ ಒಟ್ಟು ಎಂಟು ಜನರಿದ್ದರು ಎಂದು ತಿಳಿದುಬಂದಿದೆ.
ಭಾರಿ ಮಳೆಯ ಕಾರಣಕ್ಕೆ ವಿಮಾನ ಲ್ಯಾಂಡಿಂಗ್ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕವಗಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ.