Cancer Hospital 2
Bottom Add. 3

*ಕಟ್ಟಡದಲ್ಲಿ ಅಗ್ನಿ ದುರಂತ; 7 ಜನರು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 7 ಜನರು ಸಜೀವ ದಹನವಾಗಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಮುಂಬೈನ ಗೋರೆಗಾಂವ್ ನ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಮುಂಜಾನೆ ಮೂರು ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಹಲವಾರು ದ್ವಿಚಕ್ರ ವಾಹನಗಳು ಹಾಗೂ ಕಾರುಗಳು ಬೆಂಕಿಗಾಹುತಿಯಾಗಿವೆ.

7 ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ 7 ಜನ ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

Bottom Add3
Bottom Ad 2

You cannot copy content of this page